ಬೆಂಗಳೂರು : ರಾಜ್ಯದ ಗ್ರಾಮೀಣಾ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗಿದ್ದ ಬೇಸಿಗೆ ರಜೆಯನ್ನು ರದ್ದುಪಡಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 2021 ನೇ ವರ್ಷದ 15 ದಿನಗಳ ಬೇಸಿಗೆ ರಜೆಯನ್ನು ನೀಡಲಾಗಿತ್ತು. ಆದರೆ ಈ ಆದೇಶವನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದುಪಡಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ 2021 ರ ಮೇ 17 ರಿಂದ 31 ರವರೆಗೆ ಮಂಜೂರು ಮಾಡಲಾಗಿತ್ತು.