ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧೆ!

ತಮಿಳುನಾಡು: “ಕರ್ನಾಟಕದ ಸಿಂಗಂ” ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ.

ನಿನ್ನೆ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಅರವಕುರಿಚಿ ವಿಧಾನಸಭಾ ಕ್ಷೇತ್ರವು ದ್ರಾವಿಡ್ ಮುನೇತ್ರ ಕಾಳಗಂ ಪಕ್ಷದ ಭದ್ರಕೋಟೆ ಎನಿಸಿದೆ. ಅಲ್ಪಸಂಖ್ಯಾತರ ಮತದಾರರೇ ಹೆಚ್ಚಿನ ಪ್ರಮಾಣದಲ್ಲಿರುವ ಈ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಈ ಬಾರಿ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿಯು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ಅಣ್ಣಾಮಲೈ ಅವರಿಗೆ ಟಿಕೆಟ್ ನೀಡಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Spread the love
  • Related Posts

    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಅಸ್ಸಾಂ…

    Spread the love

    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

    ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ…

    Spread the love

    You Missed

    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    • By admin
    • January 9, 2025
    • 28 views
    ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ

    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

    • By admin
    • January 9, 2025
    • 15 views
    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

    ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು

    • By admin
    • January 8, 2025
    • 73 views
    ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು

    ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

    • By admin
    • January 8, 2025
    • 31 views
    ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಉದ್ಘಾಟನೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ 2024-2025ರ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

    • By admin
    • January 7, 2025
    • 39 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಉದ್ಘಾಟನೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ 2024-2025ರ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿ  ಜಗದೀಪ್ ಧನ್‌ಕರ್

    ಕಾತ್ಯಾಯನಿ ಕ್ರಿಯೇಷನ್ಸ್ ನಿಂದ “ತೀರ್ಪು” ಟೆಲಿ ಚಿತ್ರಕ್ಕೆ ಮುಹೂರ್ತ

    • By admin
    • January 7, 2025
    • 102 views
    ಕಾತ್ಯಾಯನಿ ಕ್ರಿಯೇಷನ್ಸ್ ನಿಂದ “ತೀರ್ಪು” ಟೆಲಿ ಚಿತ್ರಕ್ಕೆ ಮುಹೂರ್ತ