ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ತಮಿಳುನಾಡು: ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​?
ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Spread the love
  • Related Posts

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ರಾಯಚೂರು: ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ…

    Spread the love

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.…

    Spread the love

    You Missed

    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    • By admin
    • November 19, 2024
    • 37 views
    ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್

    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    • By admin
    • November 19, 2024
    • 134 views
    ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    • By admin
    • November 19, 2024
    • 70 views
    ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌

    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    • By admin
    • November 17, 2024
    • 50 views
    ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ

    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    • By admin
    • November 14, 2024
    • 56 views
    ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 58 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ