ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶರಾದ ಅನಿಲ್ ಪ್ರಕಾಶ್ ಎಂ.ಪಿ , ಮಾತನಾಡಿ, ರಿಚರ್ಡ್ ಕೋಸ್ತಾ ಎಂ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಅಂದ್ರೆ, ಅವರು ಈ ಹಿಂದೆ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ನಾವು ಭಾವಿಸಬಹುದು. ಇನ್ನು ಬೃಹತ್ ಲೋಕ ಅದಾಲತ್ ಯೋಚನೆ ಮಾಡಲಾಗಿದೆ. ಅಲ್ಲಿ ಎಲ್ಲರೂ ಸಹಕಾರ ನೀಡಿ, ಹೆಚ್ಚು ಪ್ರಕರಣ ಇತ್ಯರ್ಥವಾಗಲು ಸಹಕಾರ ನೀಡಬೇಕು ಎಂದು ತಿಳಿಸಿದರು.ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾದ ಕೃಷ್ಣಮೂರ್ತಿ ಎನ್,ಮಾತನಾಡಿ ಅಧ್ಯಕ್ಷರು ವಕೀಲರ ಸಂಘದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಮನಸ್ಸು ಅವರದ್ದು, ಜೊತೆಗೆ ಪದಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ. ನನ್ನ 3 ವರ್ಷದ ಅವಧಿ ಯಲ್ಲಿ, ಬಂಟ್ವಾಳದಲ್ಲಿ ಯಾವುದೇ ಕೆಟ್ಟ ಅನುಭವ ಆಗಿಲ್ಲ ಎಂದು ಅವರು ತಿಳಿಸಿದರು.ನೂತನ ಎಲ್ಲಾ ಯೋಜನೆಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್,ಮಾತನಾಡಿ ಕ್ರಿಯಾಶೀಲ ಸಂಘಟನೆಯ ಪದಾಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಮಾಡಬಹುದು ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾಎಂ ಎಂ ಅವರು ಮಾತನಾಡಿಪ್ರಸಕ್ತ ವರ್ಷದಲ್ಲಿ ಮಾಡಬೇಕಾದ ಯೋಜನೆಗಳ ಬಗ್ಗೆ ಪೂರ್ವ ತಯಾರಿ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ‌ಅವರು ತಿಳಿಸಿದರು.ಹೈ ಕೋರ್ಟು ಪೀಠ ಸ್ಥಾಪನೆ ವಿಚಾರದ ಹೋರಾಟಕ್ಕೆ ವೇಗ ನೀಡುವಲ್ಲಿ ವಕೀಲ ಮಿತ್ರರ ಸಹಕಾರ ಯಾಚಿಸಿದರು. ಕೆಲಸ ಮಾಡುವ ಸಂದರ್ಭದಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಪಾಸಿಟಿವ್ ಆಗಿ ತೆಗೆದುಕೊಂಡು ವಕೀಲರ ಸಂಘದ ಅಭಿವೃದ್ಧಿಯ ಮೂಲಕ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲರಿಗೂ ‌ಧನ್ಯವಾದ ನೀಡಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್. ನಾಯಕ್ ಹಾಗೂ ಗೌರವ ಅತಿಥಿಗಳಾಗಿ , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿ ಗಳನ್ನಾಡಿದರು. ಜೊತೆ ಕಾರ್ಯದರ್ಶಿಯಾದ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ,ಪ್ರದಾನ ಕಾರ್ಯದರ್ಶಿ ಕೆ ನರೇಂದ್ರನಾಥ ಭಂಢಾರಿ ಪ್ರಸ್ತಾವಿಕವಾಗಿ‌ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ರೈ, ವಂದಿಸಿದರು. ಅಭಿನಯ ಚಿದಾನಂದ ಹಾಗೂ ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕಿರಿಯ ವಕೀಲ ಮಿತ್ರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕಿನ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ