ಬೆಂಗಳೂರು : ಬಿಬಿಎಂಪಿಯ ಯೋಜನೆಗಳಿಗೆ ಇನ್ಮುಂದೆ ರಾಜಕಾರಣಿಗಳ ಫೋಟೋ ಹಾಕಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.
ಬಸ್ ನಿಲ್ದಾಣಗಳು, ನೀರಿನ ಘಟಕಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಿಬಿಎಂಪಿ ಯೋಜನೆಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಯುಕ್ತರು ಎಂಟು ವಲಯಗಳ ಜಂಟಿ ಆಯುಕ್ತರುಗಳು ಮತ್ತು ಮುಖ್ಯ ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ ಅವರ ದೂರಿನ ಆಧಾರದ ಮೇಲೆ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಬೆಂಗಳೂರಿನ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ನೀರಿನ ಘಟಕಗಳ ಮೇಲೆ ಹಾಕಿರುವ ರಾಜಕೀಯ ನಾಯಕರ ಫೋಟೋಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಿದ್ದಾರೆ.