ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮ
ದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿ
ಬೆಳೆಯಬೇಕು ಎಂಬುದು ನಮ್ಮ ಸಂಕಲ್ಪ” ಎಂದು ಬೆನಕ ಆಸ್ಪತ್ರೆಯ ಡಾ ಗೋಪಾಲಕೃಷ್ಣ ಕೆ ಹೇಳಿದರು.

ಬೆನಕ ಆಸ್ಪತ್ರೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ ವಿಸ್ತ್ರತ ನೂತನ ಕಟ್ಟಡ ಕಾಮಗಾರಿ ಕೂಡ ಮುಗಿದಿದ್ದು, ಕಟ್ಟಡದ ಉದ್ಘಾಟನೆ ಜ. 18 ರಂದು ನಡೆಯಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ಗೋಪಾಲಕೃಷ್ಣ ಕೆ. ಅವರು “ಕೇವಲ 7 ಹಾಸಿಗೆಗಳ 2 ವೈದ್ಯರು ಹಾಗೂ 2 ದಾದಿಯರಿಂದ 2000 ರಲ್ಲಿ ಆರಂಭವಾದ ಬೆನಕ ಆಸ್ಪತ್ರೆ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಬಂದಿದೆ. ಸ್ಥಳೀಯ ಅಗತ್ಯಗಳನ್ನು ಮನಗಂಡು ಸಣ್ಣಮಟ್ಟದಲ್ಲಿ ಆರಂಭವಾದ ಆಸ್ಪತ್ರೆ ಇದೀಗ 130 ಹಾಸಿಗೆಗಳ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಗುಣಮಟ್ಟದ ಸಮಕಾಲೀನ ಆರೋಗ್ಯ ಸೇವೆಯನ್ನು ನೀಡುವ ಹಾಗೂ ಜನರ ಆಯ್ಕೆಯ ಆಸ್ಪತ್ರೆಯಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದಿದ್ದೇವೆ. ಪ್ರತಿ ವರ್ಷ ಕೂಡ ಯಾವುದಾದರೊಂದು ಹೊಸ ಸೇವೆಯನ್ನು ಆರಂಭಿಸುತ್ತಾ ಬಂದಿದ್ದೇವೆ” ಎಂದು ವಿವರಿಸಿದರು. ಇದೀಗ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು 40ಮಂದಿ ವೈದ್ಯರ ಸೇವೆಯೂ ಲಭ್ಯವಿದೆ ಎಂದು ವಿವರಿಸಿದರು.


ಬೆನಕ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮವನ್ನು ವಿಧಾನ ಸಭೆಯ ಸಭಾ ಪತಿ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ನೂತನ. ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಸರಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಇದೇ ರೀತಿ ಬೇರೆ ಬೇರೆ. ವಿಭಾಗಗಳು ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಡಾ. ಯು. ಟಿ ಇಫಿಕರ್ ಅಲಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಹಾಗೂ ಇತರ ಗಣ್ಯರು ಭಾಗಿಗಳಾಗಲಿದ್ದಾರೆ. ಎಂದು ಅವರು ತಿಳಿಸಿದರು.


ಈ ಪತ್ರಿಕಾ ಗೋಷ್ಠಿಯಲ್ಲಿ ಡಾ. ಭಾರತಿ ಜಿ. ಕೆ., ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ. ಭಟ್ , ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್‌ಜಿ ಭಟ್ ಉಪಸ್ಥಿತರಿದ್ದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 267 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 309 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ