ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ರಾಂಪುರ್ ಸೆಕ್ಟರ್‌ನಲ್ಲಿರುವ ಎಲ್‌ಒಸಿ ಬಳಿ ಇದ್ದ ಉಗ್ರರ ಎರಡು ಅಡಗುತಾಣಗಳನ್ನು ಭಾರತೀಯ ಸೇನೆ ಪತ್ತೆ ಮಾಡಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೇನೆ ಎಲ್ ಒಸಿಯ ರಾಂಪುರ್ ಸೆಕ್ಟರ್ ಬಳ ಬಳಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಎರಡು ಅಡಗುತಾಣಗಳು ಪತ್ತೆಯಾಗಿದ್ದು, ಐದು ಎಕೆ ಸರಣಿ ರೈಫಲ್‌ಗಳು, 6 ಪಿಸ್ತೂಲ್‌ಗಳು ಮತ್ತು 21 ಗ್ರೆನೇಡ್‌ಗಳು ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಂಪುರ್ ಸೆಕ್ಟರ್‌ನಲ್ಲಿನ ನಿಯಂತ್ರಣ ರೇಖೆಯಲ್ಲಿ ಸೋಮವಾರ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಪತ್ತೆಯಾದ ನಂತರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.