ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಘೋಶ್ ಮಿಥನ್ ಚಕ್ರವರ್ತಿಯನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಹಣಾಹಣಿ ನಡೆಯಲಿದೆ.