ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ

ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಅಸ್ತಿ ಪಾಸ್ತಿಗಳಿಗೂ ಅಪಾರ ಹಾನಿಯುಂಟಾಗಿರುತ್ತದೆ.

Explosive Act 1984 ಮತ್ತು Explosive Rules 2008 ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE -1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024 ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|| ಆನಂದ್ ಕ, ಭಾ.ಅ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ತಣದಿಂದ ಜಾರಿಗೆ ಬರುವಂತ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶಿಸಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮಂಗಳೂರು ಮತ್ತು ಪುತ್ತೂರು ರವರಿಗೆ ನಿರ್ದೇಶನ ನೀಡಿದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 264 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 309 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ