ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.
ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ ಕಿನ್ಯಡ್ಕ ಹಾಗೂ ಇನ್ನಿತರ ಪರಿಸರಗಳಲ್ಲಿ ಓಡಾಟ ನಡೆಸಿದೆ.
ಇದಲ್ಲದೆ 3 ಆನೆಗಳ ಹಿಂಡೊಂದು ನೆರಿಯ ಚಿಬಿದ್ರೆ,ತೋಟತ್ತಾಡಿ, ಚಾರ್ಮಾಡಿ ಗ್ರಾಮಗಳಲ್ಲಿ ಸೋಮವಾರ ಸಂಜೆ ಬಳಿಕ ಸಂಚಾರ ನಡೆಸಿದೆ.

ನೆರಿಯದ ಪರ್ಪಳ ಪ್ರದೇಶದಿಂದ ಬಂದಿದ್ದ ಹಿಂಡು ಅಣಿಯೂರು ಶಾಲೆ, ಬಯಲು,ಬಸ್ತಿ ಇತರ ಕಡೆ ಸಂಚರಿಸಿದೆ.
ಈ ವೇಳೆ ಸ್ಥಳೀಯರು ಆನೆಗಳನ್ನು ಓಡಿಸಿದ್ದು ಇದರಿಂದ ಆನೆಗಳ ಹಿಂಡು ಚದುರಿದ್ದು ಇದರಲ್ಲಿ ಒಂದು ಆನೆ ತೋಟತ್ತಾಡಿ, ಬೆಂದ್ರಾಳ ಕಡೆ ಸಂಚರಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮೀಪದ ತೋಟತ್ತಾಡಿ ಶಾಲೆ,ಕಜೆ, ದರ್ಕಾಸು ಮೊದಲಾದ ಕಡೆಗಳಲ್ಲಿ ಒಂಟಿ ಸಲಗ ಕಂಡುಬಂದಿದ್ದು ಚಿಬಿದ್ರೆಯತ್ತ ತೆರಳಿರುವ ಕುರಿತು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಇಲ್ಲಿನ ಗ್ರಾಮಗಳಲ್ಲಿ ಆನೆಗಳ ಹಾವಳಿ ಸ್ವಲ್ಪ ಕಡಿಮೆಯಾಗಿತ್ತು.ಆದರೆ ಈಗ ಒಂಟಿ ಸಲಗ ಸಹಿತ ಆನೆಗಳ ಹಿಂಡು ಕೂಡ ಕಂಡು ಬಂದಿರುವುದು ಸ್ಥಳೀಯರನ್ನು ಆತಂಕಕ್ಕೆ ತಳ್ಳಿದೆ. ಸೋಲಾರ್ ಬೇಲಿ, ಆನೆ ಕಂದಕ ಇತ್ಯಾದಿ ಇದ್ದರೂ ಇವುಗಳ ನಿರ್ವಹಣೆ ಇಲ್ಲದ ಕಾರಣ ಆನೆಗಳು ಒಂದೆಡೆಯಿಂದ ಇನ್ನೊಂದಡೆಗೆ ಸುಲಭದಲ್ಲಿ ಸಂಚರಿಸುವಂತಾಗಿದೆ. ಜನರಲ್ಲಿ ಭೀತಿಯ ವಾತಾವರಣದ ಜತೆ ಸಾಕಷ್ಟು ಕೃಷಿ ಹಾನಿ ಉಂಟಾಗುತ್ತಿದೆ ಎಂದು ಸ್ಥಳೀಯ ಕೃಷಿಕರು ಹೇಳಿದ್ದಾರೆ.

ಇದೀಗ ಕೃಷಿಗೆ ನೀರುಣಿಸುವ ಸಮಯವಾಗಿದ್ದು ರಾತ್ರಿ ಸಮಯ ನೀರಾವರಿ ವ್ಯವಸ್ಥೆಗೆ ತೋಟಗಳಿಗೆ ತೆರಳಬೇಕಾಗುತ್ತದೆ ಸಂಜೆಯಾಗುತ್ತಿದ್ದಂತೆ ಆನೆಗಳು ಅಲ್ಲಲ್ಲಿ ಕಂಡು ಬರುತ್ತಿರುವುದರಿಂದ ಈ ಭಾಗದ ಜನರು ತೋಟಗಳಿಗೆ ತೆರಳಲು ಭಯ ಪಡುವಂತಾಗಿದೆ. ಈ ಭಾಗದಲ್ಲಿ ಸುಮಾರು ಹತ್ತಕ್ಕಿಂತ ಅಧಿಕ ಆನೆಗಳಿರುವ ಶಂಕೆ ಇದೆ ಕಾಡಾನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 289 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 47 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 320 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 113 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ