ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಆರಕ್ಷಕ ಸಹಾಯಕ ಉಪನೀರಿಕ್ಷಕರಾದ ಹರಿಪ್ರಸಾದ್ ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಅಧ್ಯಕ್ಷರಾದ ಕೃಷ್ಣಬೆಳಾಲು ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಬಿಎಂಎಸ್ ಜಿಲ್ಲಾಧ್ಯಕ್ಷರಾದ ವಕೀಲರಾದ ಅನಿಲ್ ಕುಮಾರ್ , ಬೆಳ್ತಂಗಡಿ ಬಿಎಮ್ಎಸ್ ನ ತಾಲೂಕು ಅಧ್ಯಕ್ಷರಾದ ಉದಯಕುಮಾರ್ ಬಿಕೆ ,ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಮಣಿ ಹಳ್ಳ ,ಮೋಟರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಬಂಟ್ವಾಳ ಪುತ್ತೂರು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಜೇಶ್ ಮರೀಲು ಸುಳ್ಯ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಸುಳ್ಯ ,ಬಂಟ್ವಾಳ ರಿಕ್ಷಾ ಚಾಲಕ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಗಾಣಿಗ ಅವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮರ ಬಿದ್ದು ರಿಕ್ಷಾ ‌ಜಖಂ ಆದ ಅಟೋ ರಾಜ ರತ್ನಾಕರ್ ಉಜಿರೆ ಅವರಿಗೆ ಸಂಘದ ವತಿಯಿಂದ ರೂಪಾಯಿ 5000 ಧನ ಸಹಾಯ ಧನ ನೀಡಲಾಯಿತು. ಹಾಗೂ ಕ್ಷೇಮ ನಿಧಿಯ 18 ನೇ ಸಹಾಯಧನ ವನ್ನು ಸುರ್ಯ ರಿಕ್ಷಾ ಪಾರ್ಕ್ ನ ಸದಸ್ಯರಾದ ದಿನೇಶ್ ಅವರಿಗೆ ಹಸ್ತಾಂತರಿಸಲಾಯಿತು

ಕಾರ್ಯಕ್ರಮದ ನಿರೂಪಣೆಯನ್ನು ಜನಾರ್ಧನ್ ಕಾನರ್ಪ ನಿರ್ವಹಿಸಿ ಸ್ವಾಗತವನ್ನು ಸಂಘದ ಉಪಾಧ್ಯಕ್ಷರಾದ ವಸಂತ್ ಮಡಿವಾಳ ವೇಣೂರು ಧನ್ಯವಾದಗಳು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ನೇರೆವೇರಿಸಿದರು. ಕೋಶಾಧಿಕಾರಿ ಪ್ರಶಾಂತ್ ಗರ್ಡಾಡಿ ಹಾಗೂ ಲವಕುಮಾರ್ ಸಹಕರಿಸಿದರು.

Spread the love
  • Related Posts

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 256 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ