ಕಲಬುರ್ಗಿ: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಟ್ಟಾರೆ 90 ಲಕ್ಷ ರೈತರಿಗೆ ಪ್ರಸಕ್ತ ವರ್ಷ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ್ಲಲಿ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 19,370 ಕೋಟಿ ರೂ. ಅಲ್ಪಾವದಿ ಬೆಳೆ ಸಾಲ, 60 ಲಕ್ಷ ರೈತರಿಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ 1,440 ಕೋಟಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷ 17 ಲಕ್ಷ ರೈತರಿಎ 15,300 ಕೋಟಿ ರೂ. ಸಾಲ ನೀಡಬೇಕು ಎಂಬ ಗುರಿಯನ್ನು ಮುಖ್ಯಮಂತ್ರಿ ಅವರು ನೀಡಿದ್ದರು. ಆದರೆ 16,795 ಕೋಟಿ ರೂ. ಸಾಲ ನೀಡಿದ್ದೇವೆ. ಶೇ. 95 ರಷ್ಟು ಸಾಲ ವಸೂಲಿ ಮಾಡಲಾಗಿದೆ. ಈ ವರ್ಷ 30 ಲಕ್ಷ ರೈತರಿಗೆ 20,810 ಕೋಟಿ ರೂ. ಸಾಲ ನೀಡುವ ಗುರಿಯನ್ನು ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.