ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಗೋಲಿಕಟ್ಟೆ ಎಂಬಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ