ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೆ ಮತ್ತೆ ಸ್ಫೋಟದ ಸುದ್ಧಿ ಸುದ್ಧಿಯಾಗುತ್ತಲೇ ಇದೆ ಆದರೆ ಸರಕಾರ ಮಾತ್ರ ಕಣ್ಣುಮುಚ್ಚಿ ಕೂತಂತಿದೆ. ಅಕ್ರಮವನ್ನು ಸಕ್ರಮ ಮಾಡಲು ಹೊರಟವರಿಗೆ ಜಿಲೆಟಿನ್ ಸಾಗಾಟಕ್ಕೂ ನೀತಿ ನಿಯಮ ರೂಪಿಸಲು ಸಾಧ್ಯವಿಲ್ಲವೇ??? ರ2ಜ್ಯದಲ್ಲಿ ಇಷ್ಟೋಂದು ಪ್ರಮಾಣದಲ್ಲಿ ಜಿಲೆಟಿನ್ ಸ್ಫೋಟಗೊಳ್ಳುತಿವೆ ಎಂದಾದರೆ ರಾಜ್ಯದ ಭದ್ರತೆಯ ಬಗ್ಗೆ ಆಲೋಚಿಸಬೇಕಲ್ಲವೇ????? ಇದೀಗ ಶಿವಮೊಗ್ಗದ ಹುಣಸೋಡು ಕಲ್ಲುಕ್ವಾರಿ ಸ್ಪೋಟ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಇಂತಹದ್ದೇ ಸ್ಪೋಟ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲೆಟಿನ್ ಸ್ಪೋಟದಿಂದ 5 ಮಂದಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಭ್ರಮರವಾಸಿನಿ ಕ್ರಷರ್ ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಗಂಗಾಧರ್, ಮುರುಳಿ, ಮಹೇಶ್, ರಾಮು ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದು, ಗಾಯಗೊಂಡ ಓರ್ವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹುಣಸೋಡು ಸ್ಪೋಟದ ಬೆನ್ನಲ್ಲೇ ಕಲ್ಲುಕ್ವಾರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೀಗಾಗಿ ಸ್ಥಳೀಯ ಬಿಜೆಪಿ ಮುಖಂಡ ನಾಗರಾಜು ಹಾಗೂ ಆಂಧ್ರಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಅವರಿಗೆ ಸೇರಿದಂ ಕ್ರಷರ್ ನಲ್ಲಿದ್ದ ಸ್ಪೋಟಕಗಳನ್ನು ಭ್ರಮರವಾಸಿನಿ ಕ್ರಷರ್ ನಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದರು. ನಿನ್ನೆ ತಡರಾತ್ರಿ ಟಾಟಾ ಏಸ್ ಹಾಗೂ ಬೈಕ್ ಮೂಲಕ ಸ್ಪೋಟಕಗಳಿರುವ ಪ್ರದೇಶಕ್ಕೆ ತೆರಳಿದ್ದರು. ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದರು. ಆದರೆ ವಾಹನದಲ್ಲಿ ಸ್ಪೋಟಕಗಳನ್ನು ತರುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ.
ಮೃತದೇಹಗಳು ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಡಿ ಸಿ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.