ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊನೆಗೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್ಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ನೀಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ.