ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್ ನ ಟರ್ಮಿನಲ್ 1 ರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.
ಸೈರಸ್ ಪೂನಾವಾಲಾ ಹಾಗೂ ಆದಾರ್ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದ್ದು, ಈಗಾಗಲೇ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ.
ಅಗ್ನಿ ಅವಘಡ ಸಂಭವಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ 10 ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಲಸಿಕೆ ಮತ್ತು ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.