ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದ್ದು, ಬೆಳಗ್ಗೆ ಕಚೇರಿ ಕೆಲಸ ಸೇರಿದಂತೆ ಇತರೆ ಸ್ಥಳಗಳಿಗೆ ತೆರಳುವವರು ಪರದಾಡುವಂತಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜುಲೈ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗುಉ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದಾಗಿ ರಾಜ್ಯದಲ್ಲಿ ರೈತರು ತಮ್ಮ ಹೊಲಗಳನ್ನು ಹದ ಮಾಡಲು ಶುರು ಮಾಡಿದ್ದು, ಇನ್ನೇನು ಬಿತ್ತನೆ ಮಾಡಲಿದ್ದಾರೆ. ಸಹಜವಾಗಿ ಉತ್ತಮ ಮಳೆಯಾಗುತ್ತಿರುವುದರಿಂದ ರೈತರಲ್ಲಿ ಮಂದಹಾಸ ಮೂಡಿಸಿದೆ.