ಪ್ರಯಾಣಿಕರ ಅನುಕೂಲಕ್ಕಾಗಿ ದೇವದುರ್ಗ-ಧರ್ಮಸ್ಥಳ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಚಾಲನೆ

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗದಿಂದ ಧರ್ಮಸ್ಥಳಕ್ಕೆ ಸಂಪರ್ಕ ಕೊಂಡಿಯಾಗಿ ಹೊಸ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಬುಧವಾರ ಚಾಲನೆ ನೀಡಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಈ ಪ್ರದೇಶದಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಗಮನ ಸೆಳೆದಿದೆ. ಜೊತೆಗೆ ಮಹಿಳೆಯರಿಗೆ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಶ್ರಮಿಸುತ್ತಿದ್ದಾರೆ. ನಮ್ಮ ಕ್ಷೇತ್ರದ ಪ್ರಯಾಣಿಕರಿಗೆ ಈ ಹೊಸ ಬಸ್ ಸಂಚಾರ ತುಂಬಾ ಪ್ರಯೋಜನವಾಗಲಿದ್ದು, ನಾನೂ ಕೂಡ ಒಂದು ದಿನ ಇದೇ ಬಸ್‌ನಲ್ಲಿ ಧರ್ಮಸ್ಥಳಕ್ಕೆ ಹೋಗುವ ಸಂಕಲ್ಪ ಮಾಡಿದ್ದೇನೆ. ನಮ್ಮ ಕ್ಷೇತ್ರಕ್ಕೆ ಹೊಸದಾಗಿ 16 ಬಸ್‌ಗಳನ್ನು ಒದಗಿಸಬೇಕೆಂದು ಈಗಾಗಲೇ ಸಚಿವ ರಾಮಲಿಂಗಾರೆಡ್ಡಿರಿಗೆ ಮನವಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲು ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಿ, ಸರಕಾರದ ಮಟ್ಟದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವದು ಎಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ಬಳೆ, ರೇಣುಕಾ ಮಯೂರ ಸ್ವಾಮಿ, ದೊಡ್ಡ ರಂಗಣ್ಣಗೌಡ, ರಾಜಾ ರಂಗಪ್ಪ ನಾಯಕ, ಗೋವಿಂದ ರಾಜ್ ನಾಯಕ ಚಿಕ್ಕ ಗುಡ್ಡ. ದಾವುದ್ ಔಂಟಿ ಪ್ರಭು ದೊರೆದೇವದುರ್ಗ ಈಶಪ್ಪ, ಬಸವರಾಜ ಯರಮಸಾಳ, ನಬಿ ರಸೂಲ್ ಗೌರಂಪೇಟೆ, ಇಸಾಕ್ ಮೇಸ್ತಿç, ಶರಣಗೌಡ ಹೂವಿನಹೆಡ್ಗಿ ಶಾಲಂ ಉದ್ದಾರ್, ಡಿಪೋ ವ್ಯವಸ್ಥಾಪಕ ರಾಮನಗೌಡ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಾಜೇಶ ಎಂ. ಹಾಗೂ ಇತರರು ಇದ್ದರು.

Spread the love
  • Related Posts

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ