ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೋನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 64 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2420 ಸಕ್ರಿಯ ಕೊರೋನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 2,424 ಪಾಸಿಟಿವ್ ಪ್ರಕರಣಗಳಿದ್ದು, 7,184 ಮಂದಿ ಗುಣಮುಖರಾಗಿದ್ದಾರೆ. 64 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೋನಾಗೆ 299 ಮಂದಿ ಬಲಿಯಾಗಿದ್ದಾರೆ.
ಉಡುಪಿಯಲ್ಲಿ ಇಂದು 278 ಕೊರೋನಾ ಪ್ರಕರಣಗಲು ವರದಿಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,667ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,850 ಪಾಸಿಟಿವ್ ಪ್ರಕರಣಗಳಿದ್ದು, 6,735 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ಕೊರೋನಾಗೆ 82 ಮಂದಿ ಬಲಿಯಾಗಿದ್ದಾರೆ. ಇಂದು 365 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.