ಬೆಳ್ತಂಗಡಿ: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಬೆಳ್ತಂಗಡಿ ಕಾಂಗ್ರೆಸ್ ತಾಲೂಕು ಮುಖಂಡರಾದ ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.