ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 666ನೇ “ವಾತ್ಸಲ್ಯ ಮನೆ” ಹಸ್ತಾಂತರ ಹಾಗೂ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯವರು ವಿತರಿಸಿದರು ಬಳಿಕ ಮಾತನಾಡಿದ ಅವರು ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ. ಅದ್ವೈತ ತತ್ವ ಪ್ರಸಾರ ಮಾಡಿದ ಆದಿ ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಸಾರ್ವಕಾಲಿಕವಾಗಿ ಅನ್ವಯವಾಗುವಂತಹ ಮೇಲಿನಂತೆ ಉಪದೇಶ ನೀಡಿದ್ದಾರೆ. ಸಾಧ್ಯವಾದಷ್ಟು ಸಜ್ಜನರ ಸಹವಾಸ ಮಾಡಿ ಅವರ ಗುಣಗಳನ್ನು ಅನುಸರಿಸಿ ಎಲ್ಲರೂ ಪರೋಪಕಾರ ಮಾಡಬೇಕು. ಭಗವದ್ಗೀತೆ ಪಠಣದೊಂದಿಗೆ ಭಗವಂತನ ನಾಮಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಧರ್ಮಸ್ಥಳದಲ್ಲಿ ಚತುರ್ವಿದ ದಾನಪರಂಪರೆಯೊಂದಿಗೆ ಹೆಗ್ಗಡೆಯವರು ನಿರಂತರವಾಗಿ ಸಮಾಜ ಸೇವಾಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದು ಒಳ್ಳೆಯ ಕೆಲಸಗಳನ್ನು ಮಾಡುವಾಗ ವಿಘ್ನಗಳು ಸಹಜವಾಗಿ ಬರುತ್ತವೆ. ಭಗವಂತನ ಸೇವೆಯೊಂದಿಗೆ ಭಕ್ತರು ಧರ್ಮಸ್ಥಳದ ಸೇವಾಕಾರ್ಯಗಳಿಗೂ ಸಕ್ರಿಯ ಸಹಕಾರ ನೀಡಬೇಕು. ಕಷ್ಟದಲ್ಲಿರುವವರಿಗೆ “ವಾತ್ಸಲ್ಯ ಮನೆ” ನೀಡುವ ಕಾಯಕ ಅತ್ಯಂತ ಪುಣ್ಯದಾಯಕ ಸೇವೆಯಾಗಿದೆ. ಧರ್ಮಸ್ಥಳ ಕ್ಷೇತ್ರವು ಅತಿಶಯ ಕ್ಷೇತ್ರವಾಗಿ ಬೆಳೆಯಲಿ, ಬೆಳಗಲಿ ಎಂದು ಸ್ವಾಮೀಜಿ ಹಾರೈಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪೂಜ್ಯರ ಗುರುಗಳು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದ ಕಾರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶೃಂಗೇರಿಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಹೇಳಿ ಪೂಜ್ಯರ ಆಶೀರ್ವಾದ ಮತ್ತು ಮಾರ್ಗದರ್ಶನ ಇರಲಿ ಎಂದು ಕೋರಿದರು.ಮೈಸೂರಿನಲ್ಲಿ ವಾತ್ಸಲ್ಯ ಮನೆ ನೋಡಿ ತಾವು ತುಂಬಾ ಸಂತೋಷಪಟ್ಟಿರುವುದಾಗಿ ಹೆಗ್ಗಡೆಯವರು ತಿಳಿಸಿದರು. ಸ್ವಾಮೀಜಿಯವರು ಸಾನ್ನಿಧ್ಯ ಸರತಿ ಸಾಲಿನ ವ್ಯಸಸ್ಥೆ ಹಾಗೂ ವಸ್ತುಸಂಗ್ರಾಹಾಲಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ರಾಜ್ಯದಲ್ಲಿ ಐವತ್ತಮೂರು ಲಕ್ಷ ಕುಟುಂಬಗಳು ಫಲಾನುಭವಿಗಳಾಗಿದ್ದು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು. ಇಪ್ಪತ್ತು ಸಾವಿರ ವಾತ್ಸಲ್ಯ ಫಲಾನುಭವಿಗಳಿದ್ದು 2094ಮಂದಿಗೆ ಪೌಷ್ಠಿಕ ಆಹಾರ ಕಿಟ್ ವಿತರಿಸಲಾಗಿದೆ. 18500 ಮಂದಿ ಅಸಹಾಯಕರಿಗೆ ವಾತ್ಸಲ್ಯ ಕಿಟ್ ಮೂಲಕ ಪಾತ್ರೆಗಳು, ಹಾಸಿಗೆ, ಹೊದಿಕೆ ಮೊದಲಾದ ಮೂಲಭುತ ಸೌಕರ್ಯಗಳನ್ನು ಒದಗಿಸಲಾಗಿದೆ.ಒಂದು ಸಾವಿರ ವಾತ್ಸಲ್ಯ ಮನೆಗಳನ್ನು ನಿರ್ಗತಿಕರಿಗೆ ನೀಡಲು ಉದ್ದೇಶಿಸಿದ್ದು ವಾತ್ಸಲ್ಯ ಮನೆಗಳಿಗೆ ಈಗಾಗಲೇ ಹತ್ತು ಕೋಟಿ ಎಂಬೈತ್ತೆಒಂದು ಲಕ್ಷದ ಹದಿನಾಲ್ಕು ಸಾವಿರ ರೂ. ವಿನಿಯೋಗಿಸಲಾಗಿದೆ ಎಂದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸೋನಿಯಾ ಯಶೋವರ್ಮ, ಗ್ರಾಮಾಭಿವೃದ್ಧಿ ಯೋಜನೆಯ ಆಡಳಿತ ಮಂಡಳಿ ಸದಸ್ಯ ಶ್ಯಾಮ್‌ಭಟ್ ಕೆ. ಉಪಸ್ಥಿತರಿದ್ದರು. ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ. ಶ್ರೀಧರ ಭಟ್ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೆಜಸ್ ಧನ್ಯವಾದವಿತ್ತರು.ಪೂಜಾ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 15 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ