ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಹಿಂದಿಯ ‘ಎಬಿಸಿಡಿ’ ಸಿನಿಮಾದಲ್ಲಿ ನಟಿಸಿದ್ದ, ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಪೊಲೀಸ್ ಬಲೆಗೆ ಬಿದ್ದವ. ನಿನ್ನೆ ರಾತ್ರಿ ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ನಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ ಖ್ಯಾತ ಡ್ಯಾನ್ಸರ್ ಕೂಡ ಆಗಿದ್ದ. ಪ್ರಕರಣದ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡುವುದಾಗಿ ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ.