ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…