ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ -ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿಯ ಕುಪೆಟ್ಟಿಯಲ್ಲಿ ಇಂದು ಶ್ರೀ ಗಣೇಶ್ ಭಜನಾಮಂದಿರ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ನೆರವೇರಿಸಿ, ಮಾತನಾಡಿದ ಅವರು ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ. ಊರಿನ ಜನರು ಎಲ್ಲರೂ ಸೇರಿದರೆ ಇಂಥ ಸಭಾಭವನದ ನಿರ್ಮಾಣದ ಕಾರ್ಯ ಕಷ್ಟವಲ್ಲ. ತಾಲೂಕಿನ ಶಾಸಕನಾಗಿ ನನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡುತ್ತೇನೆ ಎಂದು ಹೇಳಿದರು.

ಮುಖ್ಯ ಅತಿಥಿ ರೈತಬಂಧು ಆಹಾರೋದ್ಯಮದ ಮಾಲಕರಾದ ಶ್ರೀ ಶಿವಶಂಕರ ನಾಯಕ್ ಮಾತನಾಡಿ ಇಂಥ ಪುಣ್ಯದ ಕೆಲಸದಲ್ಲಿ ಕೋಟಿ ಕೊಟ್ಟವರು ಮತ್ತು ಹತ್ತು ರೂಪಾಯಿ ಕೊಟ್ಟವರು ಎಲ್ಲರೂ ಒಂದೇ ಎಂದು ನಾವು ಅವರನ್ನು ಒಂದೇ ದೃಷ್ಟಿಯಿಂದ ನೋಡಬೇಕು ಎಂದರು.
ಇನ್ನೋರ್ವ ಮುಖ್ಯ ಅತಿಥಿ ಪ್ರಗತಿ ಶಿಕ್ಷಣ ಸಂಸ್ಥೆ ಕಾಣಿಯೂರು ಇದರ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾಲಾಡಿ ಮಾತನಾಡಿ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕೃತಿಯನ್ನು ಕಳಿಸಬೇಕು ಮತ್ತು ಇಂತಹ ಭಜನಾಮಂದಿರದ ಮೂಲಕ ಅಂತ ಕಾರ್ಯ ನಡೆಯಬೇಕು ಎಂದರು.

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಯೋಗೀಶ್ ಕುಮಾರ್ ಕಡ್ತಿಲ ಮಾತನಾಡಿ ಯುವ ಪೀಳಿಗೆ ಇಂತಹ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗುವುದು ಸಂತಸದ ವಿಷಯ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂದಿರ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಸುಧೀರ್ ಕೆ. ಎನ್ ಹಲೇಜಿ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಪ್ಪೆಟ್ಟಿ ಉಪಸ್ಥಿತರಿದ್ದರು.

ಶ್ರೀ ಪ್ರಕಾಶ್ ವಾದ್ಯ ಕೊಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಉಪನ್ಯಾಸಕ ಶ್ರೀ ಸುಧೀರ್ ಕೆ.ಎನ್ ಧನ್ಯವಾದಗೈದರು.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 90 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 55 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 57 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 140 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 79 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 91 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ