ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ‘ಪಶು ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರಅನುದಾನ: 2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:
🔹 ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ. 🔹250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 🔹200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ. 🔹ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ. 🔹ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), 🔹ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ
ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :
ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.

ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 88 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 51 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 54 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 137 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 77 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 87 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ