ಕೊಪ್ಪಳ: ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ.
ಅವರೆಲ್ಲಾ ವಿಮಾನದ ಸದ್ದು ಬಂದರೆ ಶಾಲೆಯಿಂದ ಹೊರಬಂದು ಆಕಾಶದಲ್ಲಿ ಹೋಗುತ್ತಿದ್ದ ವಿಮಾನವನ್ನು ಬೆರಗುಕಣ್ಣಿನಿಂದ ನೋಡ್ತಿದ್ದರು. ತಾವು ಕೂಡ ಒಮ್ಮೆಯಾದರೂ ವಿಮಾನದಲ್ಲಿ ಹಾರಾಡಬೇಕು ಅನ್ನೋ ಆಸೆಯಿದ್ದರು ಕೂಡ ಆರ್ಥಿಕ ಸಂಕಷ್ಟ ಮಕ್ಕಳ ಆಸೆಗೆ ಅಡ್ಡಿಯಾಗಿತ್ತು. ಆದರೆ ಮಕ್ಕಳ ಆಸೆಯನ್ನು ಶಿಕ್ಷಕರು, ಗ್ರಾಮಸ್ಥರು ಈಡೇರಿಸಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಆ ಮೂಲಕ ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೊದಲು ಎನ್ನುವುದು ಹೆಮ್ಮೆಯ ವಿಷಯವಾಗಿದೆ.
ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮೂವತ್ತೆರಡು ಮಕ್ಕಳು ಇಂದು ಶೈಕ್ಷಣಿಕ ಪ್ರವಾಸಕ್ಕೆ ಹೈದ್ರಾಬಾಗ್ಗೆ ಹೋಗಿದ್ದಾರೆ. ಆದರೆ ಅವರು ಎಲ್ಲರಂತೆ ಬಸ್, ರೈಲಿನಲ್ಲಿ ಹೋಗಿಲ್ಲ, ಬದಲಾಗಿ ವಿಮಾನದಲ್ಲಿ ಪ್ರವಾಸಕ್ಕೆ ಹೋಗಿದ್ದಾರೆ.