ಬೆಂಗಳೂರು: ಕನ್ನಡ ಚಿತ್ರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಅವರು ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸುತ್ತಿದ್ದರು. ಕೃಷ್ಣ ನಾಡಿಗ್ ಅವರಿಗೆ ಶನಿವಾರ ಚಿತ್ರೀಕರಣದಲ್ಲಿ ತೊಡಗಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.