ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ 5ರಿಂದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ 5 ರಿಂದ 9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಫೆ.5ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. 6ರಂದು ಬೆಳಿಗ್ಗೆ ತೋರಣ ಮುಹೂರ್ತ, ಧ್ವಜಾರೋಹಣ, ಸಂಜೆ ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಕುಣಿತಾ ಭಜನೆ, ಅನ್ನಸಂತರ್ಪಣೆ ನಡೆಯಲಿದೆ. ನಂತರ ಸ್ಥಳಿಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ‘ಭರಣಿ ಕೃತಿಕೆ’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ಫೆ 7ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೋಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ವಹಿಸಲಿದ್ದಾರೆ. ಅತಿಥಿಗಳಾಗಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಶ್ರೀ ಜೈನ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ್ ಕೋಟ್ಯಾನ್ ಭಾಗವಹಿಸಲಿದ್ದಾರೆ. ನಂತರ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಉತ್ಸವಬಲಿ, ಮಹಾಪೂಜೆ, ಶ್ರೀಭೂತಬಲಿ, ಕವಾಟ ಬಂಧನ, ಪಟ್ಟದಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಕುಣಿತ ಭಜನೆ ನಡೆಯಲಿದೆ.

ಫೆ.8 ರಂದು ಬೆಳಿಗ್ಗೆ ಆಶ್ಲೇಷ ಬಲಿ, ಮಹಾಪೂಜೆ (ತುಲಾಭಾರ ಸೇವೆ) ಚೂರ್ಣೋತ್ಸವ, ದರ್ಶನಬಲಿ, ಬಟ್ಟಲುಕಾಣಿಕೆ, ಪ್ರಸಾದ ವಿತರಣೆ, ಪಲ್ಲಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಯಾತ್ರಾಹೋಮ, ರಾತ್ರಿ ಧಾರ್ಮಿಕ ಸಭೆ, ಬಲಿ ಉತ್ಸವ, ಸಿರಿಗಳ ಜಾತ್ರೆ ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ ದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಃಣ, ಮಹಾಪೂಜೆ, ಸಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಹಳೆಯಂಗಡಿ-ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಭಾಗವತಿಕೆಯೊಂದಿಗೆ ಯಕ್ಷಗಾನ (ಕಾಲಮಿತಿ) ಪ್ರದರ್ಶನಗೊಳ್ಳಲಿದೆ. ಫೆ.9ರಂದು ಸಂಪ್ರೋಕ್ಷಣೆ, ಮಂಗಳಾ ಪ್ರಸಾದ ವಿತರಣೆ ಜರುಗಲಿವೆ ಎಂದು ದೇವಸ್ಥಾನದ ಆಡಳಿತ ಮೋಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತು ಕಾರ್ಯದರ್ಶಿ ಜಯಂತ ಕೋಟ್ಯಾನ್‌ ತಿಳಿಸಿದ್ದಾರೆ.

ಮುಂದಿನ ವರ್ಷ ಬ್ರಹ್ಮಕಲಶ ಸಂಭ್ರಮ

ಮರೋಡಿ ದೇವಸ್ಥಾನವು ಆಲಡೆ ಕ್ಷೇತ್ರವಾಗಿದ್ದು, ರಾಜ್ಯದಾದ್ಯಂತ ಅಪಾರ ಭಕ್ತರ ಆರಾಧನಾ ಕೇಂದ್ರವಾಗಿದೆ. ಈ ವರ್ಷದ ವಾರ್ಷಿಕ ಆಯನ‌ ಮತ್ತು ಸಿರಿಗಳ ಜಾತ್ರೆಯನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಗುತ್ತದೆ. ದೇವಸ್ಥಾನವನ್ನು 2012ರಲ್ಲಿ ಜೀರ್ಣೋದ್ಧಾರ ಮಾಡಿ, ಬ್ರಹ್ಮಕಲಶ ಮಾಡಲಾಗಿದೆ. 2024ಕ್ಕೆ ಮತ್ತೆ ಬ್ರಹ್ಮಕಲಶ ಸಂಭ್ರಮ ನಡೆಯಲಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 24 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 24 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 40 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 216 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ