ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು ಮಂಡಿಸಲಾಯಿತು.

ಮಂಗಳವಾರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವೇತನ, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡರು.

ಕೊರೋನಾದಂತಹ ಸನ್ನಿವೇಶವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರು, ಶಾಸಕರ ವೇತನ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.

ವಿಧೇಯಕವು 2020ರ ಏ.1ರಿಂದ ಬರುವ 2021ರ ಮಾ.31ರವರೆಗೆ ಜಾರಿಯಲ್ಲಿರಲಿದೆ.

🔹ಕೊರೋನಾ ಹೊಡೆತ, ಸಂಸದರ ವೇತನ ಕಡಿತ ಮಸೂದೆ ಮಂಡನೆ!

🔸ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ,

🔹2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಸದನವು ಅಂಗೀಕರಿಸಿತು.

ಮಂಡನೆಯಾದ ವಿಧೇಯಕಗಳು:

🔸ಕರ್ನಾಟಕ ರಾಜ್ಯ ಕೈಗಾರಿಕೆಗಳ(ಸೌಲಭ್ಯ) (ತಿದ್ದುಪಡಿ) ವಿಧೇಯಕ

🔹ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ

🔸ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ವಿಧೇಯಕ

Spread the love
  • Related Posts

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    You Missed

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 14 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 121 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 188 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 67 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 243 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 195 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ