ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇದೀಗ ಕೇರಳದಿಂದ ವ್ಯಾಸಂಗಕ್ಕೆಂದು ಬಂದಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಮೊನ್ನೆಯಷ್ಟೇ ಕೇರಳದಿಂದ ಬಂದಿದ್ದ 40 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ರೂಪಾಂತರಿ ಕೊರೊನಾ ಇದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಲು ಅವರ ಗಂಟಲ ದ್ರವ ಮಾದರಿಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲು ನಿರ್ಧರಿಸಲಾಗಿದೆ.
ಇತ್ತೀಚೆಗೆ ಬ್ರಿಟನ್‌ನಿಂದ ಕೇರಳಕ್ಕೆ ಆಗಮಿಸಿದ್ದವರಿಗೂ ರೂಪಾಂತರಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ದ.ಕ. ಜಿಲ್ಲೆಗೆ ಬಂದು, ಕೊರೊನಾ ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿಯನ್ನು ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಲಾಗುತ್ತಿದೆ.