ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕಂಗೆಟ್ಟ ಮುಂಡಾಜೆಯ ಬಡಕುಟುಂಬ

ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ವೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.

ಸೋಮವಾರ ರಾತ್ರಿ ಮತ್ತು ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಚರಂಡಿ ಹಾಗೂ ಕೆಲವೆಡೆ ಅರ್ಧ ಮಾಡಿಟ್ಟ ಚರಂಡಿ ಕಾಮಗಾರಿಯ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಚಂದ್ರಶೇಖರ ಅವರ ಮನೆಗೆ ನೀರು ನುಗ್ಗಿದೆ. ಈ ಹೈವೇ ಕಾಮಗಾರಿಯ ಅವಾಂತರದಿಂದಾಗಿ ಪತ್ನಿ ಮಕ್ಕಳ ಜೊತೆ ಮನೆಯಲ್ಲಿ ನೆಲೆಸಿರುವ ಚಂದ್ರಶೇಖರ ಅವರು ಇದೀಗ ಕಾಳಜಿ ಕೇಂದ್ರ ಸೇರಬೇಕಾದ ಸ್ಥಿತಿ ತಂದಿಡಲಾಗಿದೆ.

ಇವರ ಮನೆಯು ಕೆಳಭಾಗದಲ್ಲಿದ್ದು, ಮೇಲಿನ ರಸ್ತೆಯಲ್ಲಿ ಇದ್ದ ಮೋರಿಯನ್ನು 10 ತಿಂಗಳ ಹಿಂದೆ ಕೆಡವಿರುವ ಗುತ್ತಿಗೆದಾರರು, ಅರ್ಧ ಮೋರಿ ಕಾಮಗಾರಿ ನಿರ್ವಹಿಸಿ ಉಳಿದ ಭಾಗವನ್ನು ಮಣ್ಣು ಮುಚ್ಚಿ ಹಾಗೆಯೇ ಬಿಟ್ಟು ಹೋಗಿದ್ದಾರೆ.ಮೇಲ್ಬಾಗದ ಅರಣ್ಯ ಮತ್ತು ಖಾಸಗಿ ಜಾಗದಿಂದ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರಿಗೆ ಸರಾಗವಾಗಿ ಹರಿದು ಹೋಗಲು ಸ್ಥಳಾವಕಾಶವಿಲ್ಲದೆ ಪೂರ್ತಿ ನೀರು ಅವರ ಮನೆಯ ಅಂಗಳದ ಕಡೆಗೆ ಹರಿದುಬರುತ್ತಿದೆ.

ಅವರ ಮನೆಯ ಪಕ್ಕದಲ್ಲೇ ಇರುವ ಶೆಡ್ಡ್ ನೊಳಗೆ ನುಗ್ಗಿರುವ ನೀರು ಹಾಗೆಯೇ ಮುಂದಕ್ಕೆ ಅವರ ವಾಸದ ಮನೆಯ ಅಂಗಳಕ್ಕೆ ಹರಿಯುತ್ತಿದೆ. ಮನೆಯೊಳಗೆ ಕೂಡ ನೀರು ಪ್ರವೇಶಿಸಿದ್ದು ರಾಡಿಯಿಂದಾಗಿ ಮನೆಯ ಸೊತ್ತುಗಳಿಗೆ ಹಾನಿಯಾಗಿದೆ. ರಾತ್ರಿ ಇಲ್ಲಿ ತಂಗುವುದಕ್ಕೂ ಮನೆ ಮಂದಿ ಭಯಪಡುವ ಸನ್ನಿವೇಶ ಏರ್ಪಟ್ಟಿದೆ. ಅಲ್ಲದೆ ಮುಖ್ಯ ರಸ್ತೆಯಿಂದ ಇವರ ಮನೆಗೆ ಇಳಿಯಲು ಇವರೇ ಸ್ವತಃ ರಚಿಸಿಕೊಂಡಿರುವ ರಸ್ತೆಯ ಮೇಲೆ ನೀರು ಹರಿದು ಸಂಪರ್ಕ ರಸ್ತೆಯೂ ಹಾನಿಗೊಳಗಾಗಿದೆ. ಆದ್ದರಿಂದ ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು,ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕಾಗಿದೆ.

Spread the love
  • Related Posts

    ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು

    ಬೆಳ್ತಂಗಡಿ: ಧರ್ಮಸ್ಥಳದಿಂದ ಆಲಂದಡ್ಕ ಸಂಚರಿಸುತ್ತಿದ್ದ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಆಲಂದಡ್ಕಕ್ಕೆ ಹೋಗುತ್ತಿದ್ದ ಬಸ್ ಸುಮಾರು 4.30 ಕ್ಕೆ ಅಪಘಾತ…

    Spread the love

    ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

    ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್‌…

    Spread the love

    You Missed

    ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು

    • By admin
    • January 28, 2025
    • 137 views
    ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು

    ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

    • By admin
    • January 26, 2025
    • 82 views
    ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 125 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 31 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 32 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 63 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ