ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದಿಂದ ನವೆಂಬರ್ 05 ರಂದು ಬೃಹತ್ ಪ್ರತಿಭಟನೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ.

ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದು ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.

ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

Spread the love
  • Related Posts

    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್‌

    ಬಹುನಿರೀಕ್ಷಿತ ಐಸಿಸಿ ವುಮೆನ್ಸ್ ಇಂಟರ್ ನ್ಯಾಷನಲ್ ವರ್ಲ್ಡ್ ಕಪ್ ನಲ್ಲಿ ಭಾರತದ ವನಿತೆಯರು ಮೇಲುಗೈ ಸಾಧಿಸಿಯೇ ಬಿಟ್ಟಿದ್ದಾರೆ. ಈ ಮೂಲಕ ಹಿಂದೆ ಫೈನಲ್ ನಲ್ಲಿ ಅನುಭವಿಸಿದ ಎರಡು ಸೋಲುಗಳಿಗೆ ಉತ್ತರ ಕಂಡುಕೊಂಡಿದ್ದಾರೆ. ವಿಶ್ವಕಪ್ ನಲ್ಲಿ ಈ ವರ್ಷ ಮೂರನೇ ಬಾರಿಗೆ ಫೈನಲ್…

    Spread the love

    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ತಾಯಿ ಭುವನೇಶ್ವರಿ…

    Spread the love

    You Missed

    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್‌

    • By admin
    • November 2, 2025
    • 22 views
    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ  ಏಕದಿನ ಕ್ರಿಕೆಟ್ ವಿಶ್ವಕಪ್‌

    ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    • By admin
    • November 2, 2025
    • 13 views
    ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    • By admin
    • November 2, 2025
    • 12 views
    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಬಿಜೆಪಿ ರಾಜ್ಯಾಧ್ಯಕ್ಷ BYV ಕುಕ್ಕೆ ಸುಬ್ರಹ್ಮಣ್ಯ ಭೇಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಥ್

    • By admin
    • November 2, 2025
    • 52 views
    ಬಿಜೆಪಿ ರಾಜ್ಯಾಧ್ಯಕ್ಷ BYV ಕುಕ್ಕೆ ಸುಬ್ರಹ್ಮಣ್ಯ ಭೇಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಥ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    • By admin
    • October 31, 2025
    • 46 views
    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    • By admin
    • October 29, 2025
    • 59 views
    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ