ಪಿಲಿಕುಳ ವನ್ಯಜೀವಿ ಧಾಮದಲ್ಲಿ ಗೂಡಿನಿಂದ ಹೊರ ಬಂದ ಕಾಡಿನ ರಾಜ! ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಮತ್ತೇ ಮೂಲ ವಾಸಸ್ಥಾನಕ್ಕೆ ವಾಪಾಸ್!

ಮಂಗಳೂರು: ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲಕಾಲ ಆತಂಕ ಸೃಷ್ಟಿಸಿದ್ದ ವಿದ್ಯಮಾನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದಿಂದ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ನಡೆದಿರುವುದು ಜುಲೈ ತಿಂಗಳಿನಲ್ಲಿ. ಪಿಲಿಕುಳದ ಚಿರತೆ, ಹುಲಿ, ಆ ಬಳಿಕ ಸಿಂಹದ ಎನ್‌ಕ್ಲೋಶರ್ ಇದೆ. ಈ ಎನ್‌ಕ್ಲೋಶರ್‌ನ ಒಂದು ಬದಿಯಲ್ಲಿ ಮೃಗಗಳಿಗೆ ಮಲಗುವುದಕ್ಕೆ ಗೂಡುಗಳಿರುತ್ತವೆ. ಅವುಗಳಿಗೆ ಆಹಾರವನ್ನು ಹಾಕುವ, ಚಿಕಿತ್ಸೆ ನೀಡುವ ವ್ಯವಸ್ಥೆ ಎಲ್ಲವೂ ಅಲ್ಲೇ ಇರುತ್ತದೆ.

ಹೀಗಿರುವಾಗ ಜುಲೈ ತಿಂಗಳ ಒಂದು ದಿನ ಸಿಂಹದ ಗೂಡು ಶುಚಿಗೊಳಿಸಲು ನೌಕರರೊಬ್ಬರು ಹೋಗಿದ್ದಾರೆ. ಈ ಗೂಡಿನ ಬಳಿ ಕಂದಕ ಇರಲಿಲ್ಲ, ಒಂದು ಗೇಟ್ ದಾಟಿಕೊಂಡು ಹೋಗಿ ಗೂಡಿನೊಳಗೆ ಶುಚಿಗೊಳಿಸುತ್ತಿರುವಾಗ ಇನ್ನೊಂದು ಗೇಟ್‌ನ ಚಿಲಕ ಹಾಕಿಲ್ಲದ್ದರಿಂದ, ಸಿಂಹ ಹಠಾತ್ ಆಗಿ ಹೊರಬಂದಿದೆ. ನೌಕರ ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ.

ತಕ್ಷಣ ಮೃಗಾಲಯದ ನಿರ್ದೇಶಕ ಎಚ್.ಜಯಪ್ರಕಾಶ್ ಭಂಡಾರಿ ಅವರ ಮೂರು ತಂಡ ರಚನೆ ಮಾಡಿ ಇಡೀ ಝೂನ ಆವರಣ ಹುಡುಕಿದ್ದಾರೆ. ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಸುರಕ್ಷಿತ ಜಾಗದಲ್ಲಿರುವಂತೆ ಸೂಚಿಸಿದ್ದಾರೆ. ಸುಮಾರು ಮೂರು ಗಂಟೆ ಹುಡುಕಿದ ಬಳಿಕ ಸಿಂಹವು, ಸಿಂಹದ ಗೂಡಿನ ಹಿಂಭಾಗದ ಬೇಲಿ ಹಾಕಿದ ಆವರಣದಲ್ಲಿ ಹುಲ್ಲಿನ ಮರೆಯಲ್ಲಿ ಪತ್ತೆಯಾಗಿದ್ದು, ಅದನ್ನು ಪ್ರಜ್ಞೆ ತಪ್ಪಿಸಿ ಮತ್ತೆ ಗೂಡಿಗೆ ಸೇರಿಸಲಾಯಿತು.

ಇಂತಹ ಘಟನೆ ನಡೆದಾಗ ಸನ್ನದ್ಧರಾಗಲು ನಮಗೂ ಒಂದು ತರಬೇತಿ ನೀಡಿದಂತಾಯಿತು, ಅದೃಷ್ಟವಷಾತ್ ಯಾವುದೇ ಅಪಾಯ ನಡೆದಿಲ್ಲ, ಸಿಂಹ ಹೊರಬಂದಿಲ್ಲ, ಪ್ಯಾಡಕ್‌ನಲ್ಲೇ ಎನ್ನುತ್ತಾರೆ ಭಂಡಾರಿ.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 104 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 22 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 26 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 57 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ
    Let's chat on WhatsApp

    How can I help you? :)

    11:28