
ಉಡುಪಿ: ಬೆಳ್ತಂಗಡಿಯ ಉಜಿರೆಯ ತಿಮರೋಡಿಯಿಂದ ಪ್ರಕರಣವೊಂದಕ್ಕೆ ಬೇಕಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕರೆತರುವ ನಿಟ್ಟಿನಲ್ಲಿ ಬ್ರಹ್ಮಾವರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿತರನ್ನು ವಶಕ್ಕೆ ಪಡೆದು ಬರುತ್ತಿದ್ದ ವೇಳೆ ಕಾರ್ಕಳದ ಹೊಸ್ಮಾರು ಎಂಬಲ್ಲಿ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ತಿಮರೋಡಿ ಬೆಂಬಲಿಗರು ಅಪಘಾತ ನಡೆಸಿದ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಗ್ಗೆ ವರದಿಯಾಗಿದೆ.
ಘಟನೆಯ ವಿವರ: ದಿನಾಂಕ 21/08/2025 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮ್ಮರೋಡಿ ರವರನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಹಲವು ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಈ ಬಗ್ಗೆ ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ಗುದ್ದಿ ಆರೋಪಿತರನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ದಸ್ತಗಿರಿ ಮಾಡಿದ್ದು ಮುಂದಿನ ಕ್ರಮಕ್ಕೆ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿ KA70M3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ