ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು!! ಶಿಕ್ಷೆ ಪ್ರಮಾಣ ನಾಳೆ ಪ್ರಕಟ

ಹಾಸನ: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.14 ತಿಂಗಳಿನಿಂದ ಸೆರೆಮನೆ ವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಮತ್ತೆ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಶಿಕ್ಷೆ ಪ್ರಮಾಣವನ್ನು ಶನಿವಾರದಂದು ಪ್ರಕಟಿಸಲಾಗುವುದು ಎಂದು ಪೀಠ ಹೇಳಿದೆ.ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್‌ ಗಜಾನನ ಭಟ್ ಜು.30 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಆದರೆ, ಇದೀಗ ಸಿಐಡಿ ತನಿಖಾಧಿಕಾರಿಗಳು ಹಾಗೂ ಆರೋಪಿ ಪರ ವಕೀಲರಿಂದ ಕೆಲವೊಂದು ಸ್ಪಷ್ಟನೆಗೆ ಕೋರ್ಟ್‌ ಸೂಚಿಸಿದ ಹಿನ್ನೆಲೆಯಲ್ಲಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್‌ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ ಒಟ್ಟು 9 ಆರೋಪಿಗಳಿದ್ದಾರೆ. ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ. ಅಶ್ಲೀಲ ವಿಡಿಯೋಗಳು ಪ್ರಜ್ವಲ್‌ ಮೊಬೈಲ್‌ನಿಂದಲೇ ಆತನ ಚಾಲಕನ ಮೊಬೈಲ್‌ಗೆ ಹೇಗೆ ವರ್ಗಾವಣೆಯಾಯಿತು ಎಂಬ ಸ್ಪಷ್ಟೀಕರಣ ಮತ್ತು ಕೆಲವು ತಾಂತ್ರಿಕ ಕಾರಣದಿಂದ ತೀರ್ಪು ಅನ್ನು ಮುಂದೂಡಲಾಗಿದೆ. ಪ್ರಮುಖವಾಗಿ ತನಿಖಾಧಿಕಾರಿ ಘಟನಾ ಸ್ಥಳ ತೋರಿಸಲು ಬಳಸಿರುವ ಗೂಗಲ್‌ ಮ್ಯಾಪನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಮತ್ತು ಆರೋಪಿಯಿಂದ ಜಪ್ತಿ ಮಾಡಿರುವ ಮೊಬೈಲ್‌ ಕುರಿತು ಕೆಲ ವಿವರಣೆ ಬೇಕಿರುವ ಕಾರಣ ತೀರ್ಪು ಮುಂದೂಡಲಾಗಿದೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 35 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ