ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಯಲ್ಲಿ ಮೇ 17 ರಂದು ಭಾರಿ ಮಳೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮೇ 14 ಮತ್ತು 15 ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 14 ರಂದು 64 ಮಿ.ಮೀ ಗಿಂತ ಹೆಚ್ಚು. ಹಾಗೂ ಮೇ 15 ರಂದು 115 ಮಿ.ಮೀ ಗಿಂತ ಹೆಚ್ಚು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.