ಸೂಪರ್ ಸ್ಟಾರ್ ರಜನಿಕಾಂತ್ 2019-20 ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ

ನವದೆಹಲಿ: ತಮಿಳುನಾಡಿನ ವಿಧಾನಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಪಕ್ಷದ ಚಟುವಟಿಕೆ ಆರಂಭಿಸುವ ಹೊತ್ತಿನಲ್ಲೇ ಅನಾರೋಗ್ಯಕ್ಕಿಡಾಗಿ ಚುನಾವಣೆ ಹಾಗೂ ರಾಜಕಾರಣದಿಂದ ದೂರ ಇರುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೆ ಸೂಪರ್ ಸ್ಟಾರ್ ಅಭಿಮಾನಿಗಳಿಗೊಂದು ಸಿಹಿಸುದ್ದಿ ಸಿಕ್ಕಿದಂತಾಗಿದೆ.

ತಲೈವಾ ರಾಜಕೀಯದಿಂದ ದೂರ ಉಳಿದಿದ್ದರಿಂದ ಬೇಸರದಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ರಜನಿಕಾಂತ್ ಗೆ ಸಿನಿಮಾರಂಗದ ಜೀವಮಾನಸಾಧನೆಗಾಗಿ ಸಿನಿಮಾ ರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮೂಲಕ ಪ್ರಶಸ್ತಿ ವಿಚಾರವನ್ನು ಹಂಚಿಕೊಂಡಿದ್ದು, ಭಾರತ ಚಿತ್ರರಂಗದ ಇತಿಹಾಸದಲ್ಲಿಯೇ ಒಬ್ಬ ಅತ್ಯುತ್ತಮ  ನಟರಾದ ರಜನಿಕಾಂತ್ ಅವರಿಗೆ 2019-20  ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಮಾಡಲು ಸಂತೋಷ ಎನ್ನಿಸುತ್ತಿದೆ ಎಂದಿದ್ದಾರೆ.

ನಟ,ನಿರ್ಮಾಪಕ ಹಾಗೂ ಚಿತ್ರಕಥೆಕಾರರಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಕೊಡುಗೆ ಚಿತ್ರರಂಗಕ್ಕೆ ಅಪಾರವಿದೆ. ಅವರಿಗೆ ಈ ಪ್ರಶಸ್ತಿ ಸಂದಿರೋದು ಖುಷಿ ತಂದಿದೆ ಎಂದಿದ್ದಾರೆ. ಇನ್ನು ಕೇಂದ್ರ ಸಚಿವರ  ಈ ವಿಚಾರ ಪ್ರಕಟಿಸುತ್ತಿದ್ದಂತೆ ತಲೈವಾ ಅಭಿಮಾನಿಗಳು ಫುಲ್ ಖುಷಿಯಾಗಿದ್ದು ಶುಭಾಶಯ ಕೋರುತ್ತಿದ್ದಾರೆ.

40 ವರ್ಷಗಳ ತಮಿಳು,ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳ ಪ್ರೀತಿ-ಗೌರವ ಗಳಿಸಿ ದುಡಿದ ರಜನಿಕಾಂತ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿರುವುದನ್ನು ಚಿತ್ರರಂಗದ ಗಣ್ಯರು ಸ್ವಾಗತಿಸಿದ್ದು, ಅಭಿನಂದಿಸಿದ್ದಾರೆ.

ಸಿನಿಮಾರಂಗದ ಜೀವಮಾನದ ಸಾಧನೆಗಾಗಿ  ಭಾರತೀಯ ಸಿನಿಮಾರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, 1969 ರಿಂದ ಪ್ರಶಸ್ತಿ ನೀಡುತ್ತ ಬರಲಾಗಿದೆ. ಪ್ರಶಸ್ತಿ, ಸ್ವರ್ಣಕಮಲ ಪದಕ,10 ಲಕ್ಷ ರೂ ನಗದು ಹಾಗೂ ಶಾಲು ಒಳಗೊಂಡಿರುತ್ತದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 270 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 310 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ