ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ‌ ನ್ಯೂನತೆಯನ್ನು ಮೆಟ್ಟಿನಿಂತು ಛಲ ಬಿಡದೇ ತಮ್ಮ ಎರಡು ಕಾಲುಗಳಿಂದಲೇ ಪರೀಕ್ಷೆ ಬರೆದು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ.

ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ ಕಾಲಿನಿಂದಲೇ ಮತ ಚಲಾಯಿಸುವ ಮೂಲಕ ಅವರು ರಾಜ್ಯದ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಸದ್ಯ ಅವರು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ವಿಶೇಷ ಸಾಧನೆಯನ್ನು ಅಸಾಮಾನ್ಯ ಸಾಧನೆ ಎಂದು ಪರಿಗಣಿಸಿ ಅವರನ್ನು ಈ‌ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ ಎಂದು ಆಯ್ಕೆ ಮಂಡಳಿ ಘೋಷಿಸಿದೆ.

ಅಂಗವೈಕಲ್ಯತೆ ಎಂಬುವುದನ್ನು ಮರೆತು ಧೃತಿಗೆಡದೇ ಪ್ರಯತ್ನ ಪಟ್ಟಲ್ಲಿ ಎಲ್ಲವನ್ನೂ ಮನಸ್ಸಿನಿಂದ ಸಾಧಿಸಬಹುದು. ದೇಹದ ಅಂಗ ನ್ಯೂನತೆಯ ಬಗ್ಗೆ ಯೋಚಿಸದೇ ಸಾಧಿಸಿದರೆ ಎಲ್ಲವನ್ನೂ ಜಯಿಸಬಹುದು ಅಂದ್ರು. ಹುಟ್ಟಿನಿಂದಲೇ ನನಗೆ ಕೈಗಳಿಲ್ಲದಿದ್ದರೂ ಕಾಲನ್ನೇ ಕೈಗಳನ್ನಾಗಿಸಿಕೊಂಡು ಅದರಲ್ಲೇ ನನ್ನ ದಿನನಿತ್ಯದ ಕೆಲಸಗಳನ್ನು ಮಾಡುತ್ತೇನೆ, ಅದಲ್ಲದೆ ಎಲ್ಲರಂತೆ ನಾನೂ ವಿದ್ಯಾಭ್ಯಾಸ ‌ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಮುಗಿಸಿ ಇದೀಗ ನೌಕರಿಯನ್ನು ಮಾಡುತಿದ್ದೇನೆ. ಕೈಗಳಿಲ್ಲ ಎಂದು ಧೃತಿಗೆಟ್ಟು ಕುಳಿತಿದ್ದರೆ ನಾನು ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿರಲಿಲ್ಲ, ಈ ನನ್ನ ಪ್ರಯತ್ನಕ್ಕೆ ನಮ್ಮ ಮನೆಯವರು ಶಾಲಾ ಅಧ್ಯಾಪಕರು, ಗೆಳೆಯರು ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಾ ಬರುತಿದ್ದಾರೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೋಹನ್ ಆಳ್ವಾ ಅವರು ಉಚಿತ ಶಿಕ್ಷಣ ನೀಡಿದ್ದಲ್ಲದೇ ಅದೇ ಕಾಲೇಜಿನಲ್ಲಿ ಉದ್ಯೋಗವನ್ನೂ ಕಲ್ಪಿಸಿ ಕೊಟ್ಟಿದ್ದಾರೆ. ನನ್ನ ಎಲ್ಲ ಪ್ರಯತ್ನಗಳಿಗೆ ಸಹಕಾರ ನೀಡಿದ ಹಾಗೂ ನನ್ನ ಸಾಧನೆಯನ್ನು ಗುರುತಿಸಿ ಗೌರವಿಸಿದ ಸಂಘ ಸಂಸ್ಥೆಗಳಿಗೆ ಅಭಿನಂದನೆಗಳು ಎಂದ ಸಬಿತಾ ಮೋನಿಸ್ , ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಗೆ ಗೌರವ ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕು‌ ಹಾಗೆಯೇ ಮಹಿಳೆಯರೂ ಕೂಡ ಧೃತಿಗೆಡದೇ ಪ್ರಯತ್ನ ಪಡಬೇಕು ಆಗ ಪ್ರಯತ್ನಕ್ಕೆ ಫಲ ಸಿಕ್ಕೆಸಿಗುತ್ತದೆ ಎಂದು ಸಾಧಕಿ ಸಬಿತಾ ಮೋನಿಸ್ ಅಭಿಪ್ರಾಯಪಟ್ಟರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 281 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 53 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ