ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ. ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Spread the love
  • Related Posts

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಬೆಂಗಳೂರು: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವಕನ ಟ್ರಾವೆಲ್ ಹಿಸ್ಟ್ರಿ ಬೆಚ್ಚಿ ಬೀಳಿಸುವಂತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಆತಂಕ ಎದುರಾಗಿದೆ.ಕೇರಳದ ಮಲಪ್ಪುರಂ ಮೂಲದ 23 ವರ್ಷದ ವಿದ್ಯಾರ್ಥಿ ನಿಫಾ ಸೋಂಕಿನಿಂದ ಮೃತಪಟ್ಟಿರುವುದು…

    Spread the love

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಮತ್ತೊಂದು ಬಾರಿ ಗುಂಡಿ ದಾಳಿಯೊಂದರಿಂದ ಪಾರಾಗಿದ್ದಾರೆ. ಇದು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಅವರಿಗೆ ಎದುರಾದ ಎರಡನೇ ಅಪಾಯವಾಗಿದೆ. ಅವರ ಮೇಲಿನ ದಾಳಿಯ ಸಂಚು ಭಾನುವಾರ ವರದಿಯಾಗಿದೆ. “ಅಧ್ಯಕ್ಷ ಟ್ರಂಪ್…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ