
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದ ತಾಲ್ಲೂಕಿನ ಮಾರೆನಹಳ್ಳಿ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ. ಮಂಗಳೂರಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.