ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ರವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ.
ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ. ಎಸ್.ಎಂ.ಕೆ ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಅಂತ್ಯಕ್ರಿಯೆಯನ್ನು ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.