ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ ಪಥದಲ್ಲಿದ್ದು ಪ್ರಸಕ್ತ ಸಾಲಿನಲ್ಲಿ 42 ಲಕ್ಷ ರೂ. ಲಾಭಗಳಿಸಿದೆ. ಉಜಿರೆಯಲ್ಲಿ ಸಂಘವು ಹೊಂದಿರುವ 15 ಕೋ. ರೂ. ಮೌಲ್ಯದ ಆಸ್ತಿಯಲ್ಲಿ 10 ಕೋ.ರೂ. ವೆಚ್ಚದ ಸುಸಜ್ಜಿತ ಸಭಾಭವನ ನಿರ್ಮಾಣ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಘೋಷಣೆ ಮಾಡಲಾಯಿತು.
ಪ್ರತಿಭಾ ಪುರಸ್ಕಾರ:
ಪಿಯುಸಿಯಲ್ಲಿ ಶೇ.90 ಅಂಕಕ್ಕಿಂತ ಮೇಲ್ಪಟ್ಟು ಅಂಕ ಪಡೆದ ಕೆ.ಎಸ್.ಹಿಮಕರ ಗೌಡ ಕೂಡಿಗೆ, ಕವನಾ ಚಾರ್ಮಾಡಿ, ಪ್ರಜ್ವಲ್ ಅರಳಿ, ಎಸೆಸೆಲ್ಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದ ಹರ್ಷ ಎಂ.ಎಚ್. ಮರಕಡ, ಗೌತಮಿ ಡಿ. ಬಡೆಕೊಟ್ಟು, ಸಂಜನಾ ಗಾಂಜಾಲು ಅವರನ್ನು ಗೌರವಿಸಲಾಯಿತು.
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜಿ ವರದಿ ವಾಚಿಸಿದರು. ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕರಾದ ಎನ್.ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ದಾಮೋದರ ಗೌಡ ಸುರುಳಿ, ಕೆ.ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕತ್ತು, ಬಿ.ಕೃಷ್ಣಪ್ಪ ಗೌಡ ಬೇಂಗಳ, ಜಯಂತ ಗೌಡ ಓಣಿಯಾಲು, ಭರತ್ ಕುಮಾರ್ ಗೌಡ ಹಾನಿಬೆಟ್ಟು, ಕೆ.ಸಂಜೀವ ಗೌಡ ಪಾಂಚಜನ್ಯ ಸರೋಜಿನಿ, ಚೇತನಾ ಉಪಸ್ಥಿತರಿದ್ದರು.
ಚೇತನಾ ಚಂದ್ರಶೇಖರ್ ಪ್ರಾರ್ಥನೆ ನೆರವೇರಿಸಿ ನಿರ್ದೇಶಕರಾದ ಧರ್ಮರಾಜ ಗೌಡ ಅಡ್ಯಾಡಿ ವಂದಿಸಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.