ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆದೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಆದ್ರೇ ಪಾರ್ಸಲ್ ಗೆ ಅವಕಾಶ ನೀಡಲಾಗಿದೆ.
ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.