ಹಿಂದೂ ದೇವಾಲಯಗಳ ಆರ್ಥಿಕ ಸಂಪತ್ತು ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡದಂತೆ ಸಚಿವರ ಖಡಕ್ ಆದೇಶ

ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ತಕ್ಷಣ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸೂಚಿಸಿದ್ದಾರೆ. ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.


ರಾಜ್ಯದಲ್ಲಿ 27ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 22 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 21 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 62 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ