ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣ: ಹಿಂದೂ ಯುವಕನ ತೇಜೊವಧೆಗೆ ಯತ್ನ ಆರೋಪ! ಇತ್ತಂಡಗಳಿಂದ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಕೆ!

ಬೆಳ್ತಂಗಡಿ: ಇತ್ತೀಚೆಗೆ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ವೀಡಿಯೋ ಒಂದನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪವನ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ದಿನದಂದು ಎಸ್.ಡಿ.ಪಿ.ಐ ಪಕ್ಷದ ಬೆಂಬಲಿತರು ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ಸಂಭ್ರಮಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲವರು ಪಾಕಿಸ್ಥಾನಕ್ಕೆ ಪರ ಘೋಷಣೆ ಕೂಗಿದ್ದರು ಎಂಬ ಆರೋಪದಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇದಕ್ಕೆ ಪೂರಕವಾಗಿ ಹಿಂದು ಕಾರ್ಯಕರ್ತನೋರ್ವನ ಭಾವಚಿತ್ರ ಬಳಸಿ ಅವಹೇಳನ ಮಾಡಿರುವ ಕುರಿತು ಇಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಗಿದೆ.

ಉಜಿರೆ ನಿವಾಸಿ ಹಿಂದೂ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ‌ ಹರಿಬಿಡಲಾಗಿತ್ತು. ಈ ವಿಚಾರವಾಗಿ ತನ್ನ ಮಾನಹಾನಿಗೆ ಪ್ರಯತ್ನಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತರ ವಿರುದ್ಧ ದೂರು ನೀಡಿದ್ದಾರೆ.

ಅದೇ ರೀತಿ ಉಜಿರೆ ಮತದಾನ ಎಣಿಕೆ ವೇಳೆ ಹಿಂದೂ ಕಾರ್ಯಕರ್ತರೇ ದೇಶ ದ್ರೋಹದ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಎಸ್.ಡಿ.ಪಿ.ಐ. ಕಾರ್ಯಕರ್ತರು ಬೆಳ್ತಂಗಡಿ ಠಾಣೆಯಲ್ಲಿ ಪ್ರತಿ ದೂರನ್ನು ನೀಡಿದ್ದಾರೆ.

ಈ ಕುರಿತಂತೆ ಇತ್ತಂಡಗಳ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 51 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 36 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 35 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ