ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಈ ಸ್ಟರ್ ರಸ್ತೆ ಅಭಿವೃದ್ಧಿ ಹೊಂದಲಿದೆ. ಕಾಮಗಾರಿಯಲ್ಲಿ ರಸ್ತೆ ವಿಸ್ತರಣೆಗೊಳ್ಳಲಿದ್ದು, ಸುಸಜ್ಜಿತ ಚರಂಡಿಗಳು, ಅಗತ್ಯ ಸ್ಥಳಗಳಲ್ಲಿ ಕಿರು ಸೇತುವೆ, ಸೇತುವೆಗಳು, ಧರ್ಮಸ್ಥಳದ ಮುಖ್ಯದ್ವಾರದ ಬಳಿ ಬೆಂಗಳೂರು ಮೆಜೆಸ್ಟಿಕ್ ಮಾದರಿಯ ಅಂಡರ್ ಪಾಸ್, ರಾತ್ರಿಯ ಸಂಚಾರ ಸುರಕ್ಷತೆಗೆ ಪೇಟೆ ಪ್ರದೇಶಗಳಲ್ಲಿ ವಿಶೇಷ ವಿದ್ಯುತ್ ದೀಪಗಳ ಅಳವಡಿಕೆಯಾಗಲಿದೆ. ಈ ರಸ್ತೆಯು 4 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಗೊಂಡಿದೆ. ಬಳಿಕ ಸಾಕಷ್ಟು ಸಮೀಕ್ಷೆಗಳು ನಡೆದಿವೆ. ಉಜಿರೆ- ಪೆರಿಯಶಾಂತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಮರಗಳು ತೆರವುಗೊಳ್ಳಬೇಕಾಗಿದ್ದು ಅವುಗಳ ಲೆಕ್ಕಾಚಾರ ಪೂರ್ಣಗೊಂಡಿದೆ.ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅಥವಾ ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಒಳದಾರಿಗಳನ್ನು ಮೇಲ್ದರ್ಜೆಗೇರಿಸುವ ಸ್ಟರ್ ಯೋಜನೆಯಡಿ ನಡೆಯಲಿರುವ ಈ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವವರಿಗೆ ಅನುಕೂಲವಾಗಲಿದೆ.ಉಜಿರೆ ಪೇಟೆಯಿಂದ ಸಿದ್ದವನ ತನಕ ಈಗಾಗಲೇ ರಸ್ತೆ ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಮತ್ತೆ ಕಾಮಗಾರಿ ನಡೆಯಲಿದೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆ ಅಭಿವೃದ್ಧಿ ಹೊಂದಿದ್ದರೂ, ಇಲ್ಲಿ ಸರಿಯಾದ ಫುಟ್ಪಾತ್, ಪಾರ್ಕಿಂಗ್ ವ್ಯವಸ್ಥೆಗಳು ಇರುವುದಿಲ್ಲರಸ್ತೆ ಅಭಿವೃದ್ಧಿ ಹೊಂದಿರುವ ಜಾಗಗಳಲ್ಲಿ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಇತರ ವಾಹನ ಸವಾರರು ಹೈರಾಣರಾಗುತ್ತಿದ್ದಾರೆ.

Spread the love
  • Related Posts

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ, ಕುವೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಸಚಿವರಾದ ಎಂ‌.ಬಿ ಪಾಟೀಲ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ…

    Spread the love

    You Missed

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    • By admin
    • November 21, 2025
    • 84 views
    ಮಚ್ಚಿನ : ಬಳ್ಳಮಂಜ  ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ  ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    • By admin
    • November 21, 2025
    • 101 views
    ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    • By admin
    • November 18, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    • By admin
    • November 18, 2025
    • 17 views
    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    • By admin
    • November 17, 2025
    • 37 views
    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

    • By admin
    • November 17, 2025
    • 18 views
    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು