ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್‌ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು, ಬಹುತೇಕ ಮಂದಿಗೆ ಗಾಯವಾಗಿತ್ತು.

ಸಾರಿಗೆ ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿತ್ತು.

ಹಾಗಾಗಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಾರಿಗೆ ಇಲಾಖೆಯ ನಿರ್ಲಕ್ಷ್ಯತೆಯಿಂದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆ ವಿರುದ್ಧ ಪ್ರತಿಭಟನೆಯನ್ನು ಇಂದು ಉಜಿರೆ ಸರ್ಕಲ್‌ ಬಳಿ ಮಾಡಿದೆ.

ಬಸ್‌ನ ಸ್ಟೇರಿಂಗ್‌ ಕಟ್‌ ಆಗಿ ಅದರ ಕಂಡೀಷನ್‌ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಮಾತ್ರವಲ್ಲದೇ ಜನರಿಗೆ ಹಾನಿಯುಂಟಾಗುವ ಘಟನೆ ನಡೆದಿದೆ. ಈ ವಿಚಾರದ ವಿರುದ್ಧ ಈಗಾಗಲೇ ವಿದ್ಯಾರ್ಥಿ ಪರಿಷತ್‌ ಅನೇಕ ವರ್ಷಗಳಿಂದ ಬಸ್‌ನ ಸಮಸ್ಯೆ ಸರಿ ಮಾಡಬೇಕು ಜೊತೆಗೆ ಬಸ್‌ನ ಸಂಖ್ಯೆಯನ್ನು ಹೆಚ್ಚು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟವನ್ನು ಮಾಡುತ್ತಾ ಬಂದಿದೆ.

ಆದರೆ ಇಂತಹ ಹೋರಾಟಕ್ಕೆ ಸರಕಾರ ಯಾವುದೇ ರೀತಿಯ ಬೆಲೆಯನ್ನು ಕೊಡದ ನಿಟ್ಟಿನಲ್ಲಿ ಇಂದು ಉಜಿರೆ ಸರ್ಕಲ್‌ನಲ್ಲಿ ವಿದ್ಯಾರ್ಥಿ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ. ಹಾಗಾಗಿ ಹೋರಾಟ ಸ್ಥಳಕ್ಕೆ ಡಿಪೋ ಮ್ಯಾನೇಜರ್‌ ಬರಬೇಕು ಮತ್ತು ಜನರ ಸಮಸ್ಯೆಯನ್ನು ಆಲಿಸಬೇಕು ಎನ್ನುವುದು ನಮ್ಮ ಬೇಡಿಕೆ ಎಂದು ಜಿಲ್ಲಾ ಸಂಚಾಲಕರಾದ ಸುವಿತ್‌ ಶೆಟ್ಟಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ವಿಭಾಗ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್‌ , ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ತಾಲೂಕು ಸಂಚಾಲಕ ಪ್ರಾರ್ಥನ್‌ ಗೌಡ ಅವರು ಭಾಗವಹಿಸಿದ್ದು, ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿಗೂಡಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 270 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 310 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ