ಬೆಂಗಳೂರು: ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್ ಕತ್ತಿಯವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ನಗರದ ಡಾಲರ್ಸ್ ಕಾಲೋನಿ ತಮ್ಮ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಉಮೇಶ್ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತಿದ್ದಂತೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.