ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ.

ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ ,ಸೌತ್ ಆಫ್ರಿಕಾ ,ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಸಲಿದೆ ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈ ಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು ಸೀಸನ್(ಹಾರ್ಡ್)ಬಾಲ್ ನಲ್ಲಿ U.A.E ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು U.A.E ಪರವಾಗಿ ಆಡಿದ ಅನುಭವ ಇದೆ.ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕೆಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ UAE ತಂಡವು ರೂಟ್ ಕಪ್ ನ್ನು ಗೆದ್ದುಕೊಂಡಿತ್ತು. ಬಹುಮುಖ ಪ್ರತಿಭೆಯಾಗಿರುವ ಈಕೆ ಕ್ರಿಕೆಟಿನೊಂದಿಗೆ ವಾಲಿಬಾಲ್ ,ಅಥ್ಲೆಟಿಕ್ ,ಈಜುಗಾರಿಕೆ ಹಾಡುಗಾರಿಕೆ ಹಾಗು ನ್ರಿತ್ಯದಲ್ಲೂ ಮುಂಚೂಣಿಯಲ್ಲಿದ್ದಾಳೆ. U.A.Eಯ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ನಿಶಾ ಆಲಿ ಗರಡಿಯಲ್ಲಿ ತರಬೇತಿ ಪಡೆಯುತಿದ್ದು , U.A.E ಯ ಮಾಜಿ ನಾಯಕಿ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ನ ಅಧಿಕಾರಿಯಾಗಿರುವ ಛಾಯ ಮುದ್ದ್ಗಲ್ ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯಯ ಕ್ರಿಕೆಟಿಗೆ ತಯಾರಾಗುತಿದ್ದಾಳೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 42 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 37 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ