ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ ಜಯಪ್ರಸಾದ್ ಕಡಮ್ಮಾಜೆ ಇವರು ಉದ್ಘಾಟಿಸಿದರು. ಅಮೂಲ್ಯ ಗ್ಯಾಸ್ ಏಜೆನ್ಸಿ ಉಪ್ಪಿನಂಗಡಿಯ ಮಾಲಕರಾಗಿರುವ ಮಾಜಿ ಸೈನಿಕ ಚಂದಪ್ಪ ಮೂಲ್ಯ ಇವರು ಮಕ್ಕಳಿಗೆ ಭತ್ತ ಬೇಸಾಯದ ಅನಿವಾರ್ಯತೆಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಅಣಾವು ವಹಿಸಿದ್ದರು, ಕಾರ್ಯಕ್ರಮದಲ್ಲಿ ‌ ಮುಳಿಯ ಮನೆಯ ಹಿರಿಯರಾದ ಶ್ರೀಮತಿ ಕಲಾವತಿ ಹೆಗ್ಡೆ, ಶಾಲೆಯ ಸಂಚಾಲಕರಾದ ಯು ಜಿ ರಾಧ, ಉಪಾಧ್ಯಕ್ಷರಾದ ಶ್ರೀಮತಿ ಅನುರಾಧ ಆರ್ ಶೆಟ್ಟಿ, ಸದಸ್ಯರಾದ ಶ್ರೀ ಗುಣಕರ ಅಗ್ನಾಡಿ, ಜಯಂತ್ ಪೊರೋಳಿ, ಪೋಷಕ ಸಂಘದ ಅಧ್ಯಕ್ಷರಾದ ಶ್ರೀ ಉದಯ ಅತ್ರಮಜಲು, ಮಾತೃಭಾರತಿಯ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾಪ್ರಭಾ, ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಎಚ್ ಕೆ ಪ್ರಕಾಶ್, ಶ್ರೀ ಸುಂದರ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ವಿಮಲ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ದೈವ ನರ್ತಕರಾದ ಶ್ರೀ ಕೂಸಪ್ಪ ಮಿತ್ತಿಲ, ಇಳಂತಿಲ, ಭತ್ತ ಕೃಷಿಕ ಚಿದಾನಂದ ಸಾಲ್ಯಾನ್ ಮತ್ತು ಶಾಲೆಗೆ ಭತ್ತ ಬೇಸಾಯ ಮಾಡಲು ತಮ್ಮ ಗದ್ದೆ ನೀಡಿ ಸಹಕರಿಸಿದ ಮುಳಿಯ ಮನೆಯ ಹಿರಿಯರಾದ ಕಲಾವತಿ ಹೆಗ್ಡೆ ಇವರನ್ನು ಗೌರವಿಸಲಾಯಿತು.

ಗದ್ದೆಗೆ ಅತಿಥಿವರ್ಯರು ಹಾಲೆರೆದು, ನೇಜಿ ನೆಡುವ ಕೆಲಸಕ್ಕೆ ಚಾಲನೆ ನೀಡಿದರು.‌‌ ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕೆಸರುಗದ್ದೆಯ ಓಟ, ಹಗ್ಗಜಗ್ಗಾಟ, ಕಂಬಳ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳು ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳು ಆಗಮಿಸಿ, ಗದ್ದೆಯಲ್ಲಿ ಆಟವಾಡಿ ನೇಜಿನೆಟ್ಟು ಭತ್ತ ಬೇಸಾಯದ ಬಗ್ಗೆ ಅರಿತುಕೊಂಡರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕು| ಅನ್ವಿ ಸ್ವಾಗತಿಸಿ, ಕು| ಶಿವಾನಿ ಮತ್ತು ಕು| ಭವಿಷ್ಯ ಕಾರ್ಯಕ್ರಮ ನಿರೂಪಿಸಿದರು, ಕು| ಯಶ್ವಿತ ವಂದಿಸಿದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 263 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 308 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 52 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ